ಗುರುವಾರ, ಮಾರ್ಚ್ 30, 2017

ಇವಿಎಂ,- ಚುನಾವಣಾ ಆಯೋಗಕಗಕ್ಕೆ ಸುಪ್ರೀಂ ನೋಟಿಸ್

ಇವಿಎಂ ತಿರುಚುವಿಕೆ ವಿವಾದ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೊಟೀಸು

ನವದೆಹಲಿ: ಇತ್ತೀಚೆಗೆ ನಡೆದ 5 ರಾಜ್ಯಗಳ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವಿದ್ಯುನ್ಮಾನ ಮತಯಂತ್ರಗಳ ತಿರುಚುವಿಕೆ ವಿವಾದ ಕುರಿತು ಸಲ್ಲಿಸಲಾಗಿದ್ದ ದೂರಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಇಂದು ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೆಹರ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ನ್ಯಾಯಪೀಠ, ವಕೀಲ ಮನೋಹರ್ ಲಾಲ್ ಶರ್ಮಾ ಸಲ್ಲಿಸಿದ ದೂರಿನ ಆಧಾರದ ಮೇಲೆ ನೊಟೀಸ್ ಜಾರಿ ಮಾಡಿದೆ.

ಇತ್ತೀಚೆಗೆ ಕೊನೆಗೊಂಡ 5 ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ತಿರುಚಲಾಗಿತ್ತು. ಈ ಮತಯಂತ್ರಗಳನ್ನು ಸರಿಯಾಗಿ ಪರಿಶೀಲಿಸಬೇಕು. ಅಮೆರಿಕಾದ ಕಂಪ್ಯೂಟರ್ ವಿಜ್ಞಾನಿಗಳಿಂದ ತನಿಖೆ ನಡೆಸಬೇಕು ಎಂದು ಶರ್ಮಾ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಈ ಹಂತದಲ್ಲಿ ಸಿಬಿಐ ತನಿಖೆಗೆ ಒಳಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಉತ್ತರ ಪ್ರದೇಶ ಮತ್ತು ಪಂಜಾಬ್ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ತಿರುಚಲಾಗಿತ್ತು ಎಂದು  ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಹಿರಂಗವಾಗಿ ಆರೋಪಿಸಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ