ಇಂದಿರಾ ಬ್ಯಾನರ್ಜಿ ಮುಖ್ಯ ನ್ಯಾಯಮೂರ್ತಿ
ಚೆನ್ನೈ: ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ (59) ಅವರು ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮಿಳುನಾಡು ರಾಜ್ಯಪಾಲ ಸಿ.ಎಚ್. ವಿದ್ಯಾಸಾಗರ್ ರಾವ್ ಅವರು ಇಂದಿರಾ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಈ ವೇಳೆ ಉಪಸ್ಥಿತರಿದ್ದರು.
ಇಂದಿರಾ ಅವರು ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರು ಫೆಬ್ರುವರಿಯಲ್ಲಿ ಸುಪ್ರೀಂ ಕೋರ್ಟ್‌ಗೆ ನೇಮಕವಾಗಿದ್ದರು. ಆ ಸ್ಥಾನಕ್ಕೆ ಇಂದಿರಾ ಅವರನ್ನು ನೇಮಿಸಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ