ಶುಕ್ರವಾರ, ಫೆಬ್ರವರಿ 5, 2021

ದೇಶದ ಮೊದಲ ಕಾಗದ ರಹಿತ ಡಿಜಿಟಲ್ ಬಜೆಟ್: ನಿರ್ಮಲಾ ಸೀತಾರಾಮನ್

ದೇಶದ ಮೊದಲ ಕಾಗದ ರಹಿತ ಡಿಜಿಟಲ್ ಬಜೆಟ್: ನಿರ್ಮಲಾ ಸೀತಾರಾಮನ್

ಏಜೆನ್ಸೀಸ್‌ Updated: 
prajavani

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ 2021–22ನೇ ಹಣಕಾಸು ವರ್ಷದ ಬಜೆಟ್ ಮಂಡನೆ ಆರಂಭಿಸಿದ್ದಾರೆ.

ಇದೇ ಮೊದಲ ಬಾರಿಗೆ ಕಾಗದರಹಿತ ಡಿಜಿಟಲ್ ಬಜೆಟ್ ಮಂಡಿಸಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ದಶಕದ ಮೊದಲ ಬಜೆಟ್...
ಈ ದಶಕದ ಮೊದಲ ಬಜೆಟ್ ಕೂಡಾ ಇದಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. ದೇಶದೊಳಗಿನ ಅಥವಾ ದೇಶದ ಪ್ರದೇಶಗಳ ಮೇಲೆ ಸಂಭವಿಸಿರಬಹುದಾದ ವಿಪತ್ತುಗಳ ದೃಷ್ಟಿಯಿಂದ ನೋಡಿದರೆ ಹಿಂದೆಂದೂ ಕಂಡಿರದಂತಹ ಪರಿಸ್ಥಿತಿಯಲ್ಲಿ ಈ ಬಾರಿ ಬಜೆಟ್ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ಬಡ ಜನರಿಗೆ ಸಹಾಯ ಮಾಡಲು ಸರ್ಕಾರ ಬದ್ಧವಾಗಿದೆ ಎಂಬುದನ್ನು ಒತ್ತಿ ಹೇಳಿದರು. ಕೋವಿಡ್-19 ಎದುರಿಸುವಲ್ಲಿ ಲಸಿಕೆ ಅಭಿವೃದ್ಧಿಪಡಿಸಿರುವುದನ್ನು ಉಲ್ಲೇಖಿಸಿದರು.

ದೇಶದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಾಗದರಹಿತ ಡಿಜಿಟಲ್ ಬಜೆಟ್ ಮಂಡಿಸಲಾಗುತ್ತಿದೆ.


ಕೋವಿಡ್-19 ಹಿನ್ನೆಲೆಯಲ್ಲಿ ಬಜೆಟ್ ಪ್ರತಿಗಳನ್ನು ಮುದ್ರಿಸಲಾಗುತ್ತಿಲ್ಲ. ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಯ ಬಳಿಕ ಸಾಫ್ಟ್ ಕಾಪಿಗಳನ್ನು ಸಂಸದರಿಗೆ ಹಂಚಲಾಗುವುದು. ಸಾರ್ವಜನಿಕರು ಆ್ಯಪ್ ಮೂಲಕವೂ ಬಜೆಟ್ ಪ್ರತಿಗಳನ್ನು ಡೌನ್‌ಲೋಡ್ ಮಾಡಬಹುದಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ