Union Budget 2021: ವೆಚ್ಚ ಹೆಚ್ಚಳ, ಆರ್ಥಿಕ ಪುನಶ್ಚೇತನ
ನವದೆಹಲಿ: ಕೋವಿಡ್–19 ಸಾಂಕ್ರಾಮಿಕದಿಂದಾಗಿ ತತ್ತರಿಸಿರುವ ದೇಶದ ಅರ್ಥವ್ಯವಸ್ಥೆಯನ್ನು ಮತ್ತೆ ಹಳಿಗೆ ತರುವ ಮಹತ್ವದ ಹೊಣೆ ಹೊತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉದ್ಯೋಗ ಸೃಷ್ಟಿಗೆ ದಾರಿಯಾಗುವ ಮೂಲ ಸೌಕರ್ಯ ಅಭಿವೃದ್ಧಿಗೆ ಗಮನ ಕೇಂದ್ರೀಕರಿಸಿ ಸೋಮವಾರ ಲೋಕಸಭೆಯಲ್ಲಿ 2021–22ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಒಟ್ಟು ಆರು ಕ್ಷೇತ್ರಗಳಿಗೆ ಆದ್ಯತೆ ನೀಡುವ ಮೂಲಕ ಆರ್ಥಿಕತೆಯನ್ನು ಸರಿದಾರಿಗೆ ತರುವ ಮುನ್ನೋಟವನ್ನು ದೇಶದ ಮುಂದಿರಿಸಿದ್ದಾರೆ.
ಉದ್ಯೋಗ ಸೃಷ್ಟಿಗೆ ಇರುವ ಬಹುದೊಡ್ಡ ಅಸ್ತ್ರ ಎಂದು ಅರ್ಥಶಾಸ್ತ್ರಜ್ಞರು ಮತ್ತೆ ಮತ್ತೆ ಹೇಳಿರುವ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು ಈ ಬಜೆಟ್‌ನಲ್ಲಿ ಪ್ರಾಧಾನ್ಯ ಪಡೆದಿವೆ. 2021–22ರಲ್ಲಿ ಕೇಂದ್ರ ಸರ್ಕಾರದ ಒಟ್ಟು ಬಂಡವಾಳ ವೆಚ್ಚವು
ಒಟ್ಟು ₹5.54 ಲಕ್ಷ ಕೋಟಿ ಆಗಿರಲಿದೆ. ‘ಇದು 2020–21ರ ಬಜೆಟ್‌ಗೆ ಹೋಲಿಸಿದರೆ ಶೇ 34.5ರಷ್ಟು ಜಾಸ್ತಿ’ ಎಂದು ನಿರ್ಮಲಾ ಅವರು ಹೇಳಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ