Union Budget 2021: ಆದಾಯ ತೆರಿಗೆ ಮಿತಿ ಯಥಾಸ್ಥಿತಿ
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2020–21ನೇ ಸಾಲಿನ ಬಜೆಟ್‌ನಲ್ಲಿ, ಆದಾಯ ತೆರಿಗೆ ಮಿತಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಈ ಸಲದ ಬಜೆಟ್‌ನಲ್ಲಿ ಆದಾಯ ತೆರಿಗೆಯಲ್ಲಿ ವಿನಾಯಿತಿ ನೀಡಲಾಗುತ್ತದೆ ಎಂಬ ಮಧ್ಯಮ ವರ್ಗದ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ.
ಕಳೆದ ಹಣಕಾಸು ವರ್ಷದ ಆದಾಯ ತೆರಿಗೆ ಮಿತಿ ಪ್ರಕಾರ, ವರ್ಷಕ್ಕೆ ₹5 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ಇದೆ.
75 ವರ್ಷ ಹಾಗೂ ಮೇಲ್ಪಟ್ಟ ಹಿರಿಯ ನಾಗರಿಕರು ಪಿಂಚಣಿ ಖಾತೆ ಮತ್ತು ಎಫ್‌ಡಿಯನ್ನು ಒಂದೇ ಬ್ಯಾಂಕ್ ಶಾಖೆಯಲ್ಲಿ ಹೊಂದಿರುವವರು ಏಪ್ರಿಲ್ 1 ರಿಂದ ಐಟಿ ರಿಟರ್ನ್ ಸಲ್ಲಿಸುವ ಅವಶ್ಯಕತೆ ಇಲ್ಲ. ಬ್ಯಾಂಕುಗಳೇ ಸಂಬಂಧಿಸಿದ ತೆರಿಗೆಯನ್ನು ಕಡಿತ ಮಾಡಲಿವೆ ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ