ಮಂಗಳವಾರ, ನವೆಂಬರ್ 30, 2021

ಒಂದು ಸಿಮ್​ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು?: ಈ ವಿಚಾರ ನಿಮಗೆ ತಿಳಿದಿರಲಿ

ಒಂದು ಸಿಮ್​ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು?: ಈ ವಿಚಾರ ನಿಮಗೆ ತಿಳಿದಿರಲಿ

    

Mobile Number Portability: ಒಂದು ನೆಟ್‌ವರ್ಕ್‌ನಿಂದ ಮತ್ತೊಂದು ನೆಟ್‌ವರ್ಕ್‌ಗೆ ಮೊಬೈಲ್ ನಂಬರ್ ಅನ್ನು ನೀವು ಪೋರ್ಟ್ ಮಾಡಬೇಕಾದರೆ ಕೆಲವೊಂದು ನಿಯಮಗಳನ್ನು ತಪ್ಪದೇ ಪಾಲಿಸಬೇಕಾಗುತ್ತದೆ. ಅನೇಕರಿಗೆ ಈ ಬಗ್ಗೆ ತಿಳಿದಿರುವುದಿಲ್ಲ. ಈ ಸ್ಟೋರಿ ಓದಿ.

ಒಂದು ಸಿಮ್​ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು?: ಈ ವಿಚಾರ ನಿಮಗೆ ತಿಳಿದಿರಲಿ

ಒಂದು ನೆಟ್‌ವರ್ಕ್‌ನಿಂದ ಮತ್ತೊಂದು ನೆಟ್‌ವರ್ಕ್‌ಗೆ ಮೊಬೈಲ್ ನಂಬರ್ ಅನ್ನು ನೀವು ಪೋರ್ಟ್ ಮಾಡಬೇಕಾದರೆ ಕೆಲವೊಂದು ನಿಯಮಗಳನ್ನು ತಪ್ಪದೇ ಪಾಲಿಸಬೇಕಾಗುತ್ತದೆ. ದೇಶದಲ್ಲಿ ಕಳೆದ ವರ್ಷದ ಅಂತ್ಯದಲ್ಲಿ ಹೊಸ ಎಂಎನ್‌ಪಿ, ಅಂದರೆ ಮೊಬೈಲ್ ನಂಬರ್ ಪೋರ್ಟೆಬಿಲಿಟಿ ನಿಯಮಗಳನ್ನು ಜಾರಿಗೆ ತರಲಾಗಿತ್ತು. ಇದರಿಂದಾಗಿ ಗ್ರಾಹಕರು ಯಾವುದೇ ಸಮಸ್ಯೆಯಿಲ್ಲದೆ ಸುಲಭದಲ್ಲಿ ಮೊಬೈಲ್ ನಂಬರ್ ಪೋರ್ಟ್ ಮಾಡಿಕೊಳ್ಳಬಹುದು. ಅಲ್ಲದೆ ಒಂದು ಮೊಬೈಲ್ ಸಂಖ್ಯೆಯನ್ನು ನೀವು ಎಷ್ಟು ಬಾರಿ ಬೇಕಾದರೂ ಪೋರ್ಟ್ ಮಾಡಬಹುದು. ಇದಕ್ಕೆ ಯಾವುದೇ ನಿರ್ದಿಷ್ಟ ತಡೆಯಿಲ್ಲ.

ಆದರೆ, ನಿಮ್ಮ ಮೊಬೈಲ್ ನಂಬರ್ ಪೋರ್ಟ್ ಆಗಬೇಕು ಎಂದರೆ ಕೆಲವು ವಿಚಾರಗಳನ್ನು ನೀವು ಗಮನದಲ್ಲಿಟ್ಟುಕೊಳ್ಳಬೇಕು. ನೀವು ಮೊಬೈಲ್ ನಂಬರ್ ಮತ್ತೊಂದು ನೆಟ್‌ವರ್ಕ್‌ಗೆ ಪೋರ್ಟ್ ಮಾಡಿಕೊಳ್ಳಲು ಬಯಸಿದ್ದರೆ, ಅದಕ್ಕೂ ಮುಂಚೆ ಹಳೆಯ ಕಂಪನಿಗೆ ಬಾಕಿ ಉಳಿಸಿಕೊಂಡಿರುವ ಎಲ್ಲ ಬಿಲ್ ಮೊತ್ತವನ್ನು ಪಾವತಿಸಿರಬೇಕು. ಅಂದರೆ ವಿಶೇಷವಾಗಿ, ಪೋಸ್ಟ್ ಪೋಯ್ಡ್ ಗ್ರಾಹಕರು, ತಿಂಗಳ ಬಿಲ್ ಮೊತ್ತ ಬಾಕಿ ಉಳಿಸಿಕೊಂಡಿದ್ದರೆ, ಅದನ್ನು ಟೆಲಿಕಾಂ ಸೇವಾದಾರ ಕಂಪನಿಗೆ ಪಾಲಿಸುವುದು ಕಡ್ಡಾಯ. ಬಾಕಿ ಉಳಿಸಿಕೊಂಡಿದ್ದರೆ, ಪೋರ್ಟಿಂಗ್ ಸಾಧ್ಯವಾಗುವುದಿಲ್ಲ.

ಯಾವುದೇ ನೆಟ್‌ವರ್ಕ್‌ಗೆ ಪೋರ್ಟ್ ಆಗಬೇಕಾದರೂ, ಪ್ರಸ್ತುತ ಇರುವ ನೆಟ್‌ವರ್ಕ್‌ನಲ್ಲಿ ಕನಿಷ್ಟ 90 ದಿನ ಪೂರೈಸಬೇಕು. ಅದಕ್ಕೂ ಮುಂಚೆ ಮತ್ತೊಂದು ನೆಟ್‌ವರ್ಕ್‌ಗೆ ಪೋರ್ಟ್ ಸಾಧ್ಯವಿಲ್ಲ. ಅಲ್ಲದೆ, ಸಿಮ್ ಕಾರ್ಡ್ ಹೊಂದಿರುವ ವ್ಯಕ್ತಿ ಮತ್ತೋರ್ವ ವ್ಯಕ್ತಿಗೆ ಮಾಲಿಕತ್ವ ಹಸ್ತಾಂತರಿಸುವ ಪ್ರಕ್ರಿಯೆ ಜಾರಿಯಲ್ಲಿದ್ದರೆ, ಅಂತಹ ಸಂದರ್ಭದಲ್ಲಿ ಎಂಎನ್‌ಪಿ ಸಾಧ್ಯವಾಗುವುದಿಲ್ಲ.

ಮೊಬೈಲ್‌ ನಂಬರ್ ಪೋರ್ಟ್ ಮಾಡಲು ಈ ಕ್ರಮಗಳನ್ನು ಅನುಸರಿಸಿ:

  • ಸಿಮ್ ಪೋರ್ಟ್‌ ಮಾಡಲು UPC (ಯೂನಿಕ್ ಪೋರ್ಟಿಂಗ್ ಕೋಡ್) ಅಗತ್ಯ.
  • ಅದಕ್ಕಾಗಿ ಮೊದಲು UPC (ಯೂನಿಕ್ ಪೋರ್ಟಿಂಗ್ ಕೋಡ್) ಜನರೇಟ್ ಮಾಡಬೇಕು.
  • ಕ್ಯಾಪಿಟಲ್ ಅಕ್ಷರಗಳಲ್ಲಿ PORT-ಸ್ಪೇಸ್‌-ನಿಮ್ಮ ನೊಬೈಲ್ ಸಂಖ್ಯೆ ನಮೂದಿಸಿ. 1900 ನಂಬರ್‌ಗೆ ಎಸ್‌ಎಮ್‌ಎಸ್‌ ಮಾಡಿ.
  • ಆ ಬಳಿಕ UPC ಎಸ್‌ಎಮ್‌ಎಸ್‌ ಲಭ್ಯವಾಗುತ್ತದೆ.
  • ಪೋರ್ಟ್ ಆಗ ಬಯಸುವ ಟೆಲಿಕಾಂ ಸಂಸ್ಥೆಯ ಸರ್ವೀಸ್ ಸೆಂಟರ್‌ಗೆ ಭೇಟಿ ನೀಡಿ.
  • Customer Acquisition Form (CAF) ತುಂಬುವುದು ಮತ್ತು ಕೆವೈಸಿ ದಾಖಲಾತಿ ನೀಡಬೇಕು.

ಟೆಲಿಕಾಂ ವಲಯದಲ್ಲಿ ಎಮ್‌ಎನ್‌ಪಿ ಸೌಲಭ್ಯವು ಚಂದಾದಾರರಿಗೆ ಉಪಯುಕ್ತವಾಗಿದ್ದು, ಒಂದು ಆಪರೇಟರ್‌ನಿಂದ ಇನ್ನೊಂದು ಟೆಲಿಕಾಂ ಆಪರೇಟರ್‌ಗೆ ಬದಲಾಯಿಸಬಹುದಾಗಿದೆ. ಈ ಎಮ್‌ಎನ್‌ಪಿ ಬದಲಾವಣೆಯು ಯಶಸ್ವಿಯಾಗಲು ಸುಮಾರು ಒಂದು ವಾರ ಆಗುತ್ತಿತ್ತು. ಆದ್ರೆ ಟ್ರಾಯ್‌ನ ಹೊಸ ಎಮ್‌ಎನ್‌ಪಿ ನಿಯಮ ಜಾರಿಯಿಂದ ಈಗ ಐದು ದಿನಗಳ ಬಳಗಾಗಿ ಸಿಮ್‌ ಫೋರ್ಟ್ ಆಗಲಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ