ಸುದೀರ್ಘ ಬರಹವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಫೆಡರರ್, ‘ಲೇವರ್ ಕಪ್–2022’ರ ನಂತರ ನಿವೃತ್ತಿಯಾಗುವುದಾಗಿ ತಿಳಿಸಿದ್ದಾರೆ.
ತಮ್ಮ ವೃತ್ತಿಜೀವನದಲ್ಲಿನ ಪ್ರತಿಸ್ಪರ್ಧಿಗಳು ಹಾಗೂ ಅಭಿಮಾನಿಗಳಿಗೆ ಫೆಡರರ್ ಧನ್ಯವಾದ ಅರ್ಪಿಸಿದ್ದಾರೆ.
ರೋಜರ್ ಫೆಡರರ್ ಅವರು 24 ವರ್ಷಗಳ ಕಾಲ ಸ್ವಿಟ್ಜರ್ಲೆಂಡ್ ಅನ್ನು ಪ್ರತಿನಿಧಿಸಿದ್ದಾರೆ.