ಈ ಮೂಲಕ ಸ್ಪೇನ್‌ನ ರಫೆಲ್ ನಡಾಲ್ ಅವರ ದಾಖಲೆಯ 22 ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ಸಾಧನೆಯನ್ನು ಸರಿಗಟ್ಟಿದ್ದಾರೆ.
ಅಷ್ಟೇ ಅಲ್ಲದೆ ದಾಖಲೆಯ 10ನೇ ಬಾರಿಗೆ ಆಸ್ಟ್ರೇಲಿಯನ್ ಓಪನ್ ಗ್ರ್ಯಾನ್ ಸ್ಲಾಮ್ ಟೂರ್ನಿ ಗೆದ್ದ ಕೀರ್ತಿಗೆ ಪಾತ್ರರಾಗಿದ್ದಾರೆ.
ಭಾನುವಾರ ರಾಡ್ ಲೇವರ್ ಅರೆನಾದಲ್ಲಿ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ ಮುಖಾಮುಖಿಯಲ್ಲಿ ಜೊಕೊವಿಚ್ ಅವರು ಗ್ರೀಸ್‌ನ ಸ್ಟೆಫಾನೊಸ್ ಸಿಟ್ಸಿಪಸ್ ವಿರುದ್ಧ 6-3, 7-6 (7-4), 7-6 (7-5)ರ ಅಂತರದಲ್ಲಿ ಗೆಲುವು ದಾಖಲಿಸಿದರು.
ಪಂದ್ಯದುದ್ಧಕ್ಕೂ ಎದುರಾಳಿ ವಿರುದ್ಧ ಸವಾರಿ ಮಾಡಿದ 35 ವರ್ಷದ ಜೊಕೊವಿಚ್ ನೂತನ ಇತಿಹಾಸ ಸೃಷ್ಟಿಸಿದರು.
ಕೊರೊನಾ ಲಸಿಕೆ ಹಾಕಿಸಿಕೊಳ್ಳದ ಕಾರಣ ಜೊಕೊವಿಚ್ ಅವರು ಕಳೆದ ಆವೃತ್ತಿಯ ಟೂರ್ನಿಯಲ್ಲಿ ಆಡುವ ಅವಕಾಶ ಕಳೆದುಕೊಂಡಿದ್ದರು. ಈ ಗೆಲುವಿನೊಂದಿಗೆ ಜೊಕೊವಿಚ್ ಅವರು ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ.
24 ವರ್ಷದ ಸಿಟ್ಸಿಪಸ್, 2021ರ ಫ್ರೆಂಚ್ ಓಪನ್ ಟೂರ್ನಿಯಲ್ಲಿ ಫೈನಲ್ ತಲುಪಿದ್ದರು. ಆಗ ಪ್ರಶಸ್ತಿ ಸುತ್ತಿನಲ್ಲಿ ಜೊಕೊವಿಚ್ ಎದುರೇ ಸೋತಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ